ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್
ಸಿಂದಗಿ(Sindagi): ಕಬ್ಬಿನ ಟ್ರ್ಯಾಕ್ಟರ್ ವೊಂದು ಕೆಇಬಿ ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪಟ್ಟಣದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಅಥಣಿ ಮೂಲದ ಟ್ರ್ಯಾಕ್ಟರ್ ಆಲಮೇಲ ಭಾಗದಲ್ಲಿನ ಫ್ಯಾಕ್ಟರ್ ಗೆ ಕಬ್ಬು ತೆಗೆದುಕೊಂಡು ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.