ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಹೊಲದಲ್ಲಿ ಉಳಿಮೆ ಮಾಡುವಾಗ ಹುಲಿ ದಾಳಿಯಿಂದ ರೈತ ಮೃತಪಟ್ಟ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಲೆಯೂರು ಆರ್ ಎಫ್ಓ ಮೇಲೆ ಮೃತ ರೈತನ ಕುಟುಂಬಸ್ಥರು ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ವೇಳೆ ಸರಗೂರು ಪೊಲೀಸರು ಅವರನ್ನು ರಕ್ಷಣೆ ಮಾಡಿ ಕರೆದುಕೊಂಡು ಹೋಗಿದ್ದಾರೆ.
ಗ್ರಾಮದಲ್ಲಿ ಪದೆಪದೆ ಹುಲಿ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ಹುಲಿ ಹೆಜ್ಜೆ ಗುರುತುಗಳು ಮೂಡಿದ್ದರೂ ಬೋನು ಇಟ್ಟಿಲ್ಲ ಅಂತಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




