ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಕುಂಭಮೇಳಕ್ಕೆ ಹೊರಟಿದ್ದ 10 ಭಕ್ತರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಪ್ರಯಾಗ್ ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ(Prayagraj Mirzapur Highway) ತಡರಾತ್ರಿ ನಡೆದಿದೆ. ಎಸ್ ಯುವಿ ಹಾಗೂ ಬಸ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಛತ್ತೀಸಗಢದ ಕೊರ್ಬಾ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಇನ್ನು ಈ ಭೀಕರ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ಇವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಹೇಳಿದ್ದಾರೆ.