ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ನೀಡಿ 10 ಕೆಜಿ ಅಕ್ಕಿಯನ್ನು ಘೋಷಣೆ ಮಾಡಿತ್ತು. ಆದರೆ, ಅಗತ್ಯ ಪ್ರಮಾಣದಲ್ಲಿ ಅಕ್ಕಿ ಇರದ ಕಾರಣ 5 ಕೆಜಿ ಅಕ್ಕಿ ಹಾಗೂ 170 ರೂಪಾಯಿ ನೀಡುತ್ತಾ ಬರುತ್ತಿದೆ. ಇನ್ಮುಂದೆ 10 ಕೆಜಿ ಅಕ್ಕಿ ಕೊಡಲಾಗುವುದು. ಅಗತ್ಯದಷ್ಟು ಅಕ್ಕಿ ಇದೆ ಎಂದು ಆಹಾರ ಸಚಿವ ಕೆ.ಹಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಎಂಎಸ್ಎಸ್ ನಿಂದ ಅಕ್ಕಿ ಖರೀದಿಸಿ ಈ ತಿಂಗಳಿಂದಲೇ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದರು.
ಕಳೆದ ಮೂರು ತಿಂಗಳಿಂದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳಿಗೆ 5 ಕೆಜಿ ಅಕ್ಕಿ ಬದಲಾಗಿ ನೀಡುವ 170 ರೂಪಾಯಿ ಜಮಾ ಆಗಿಲ್ಲ. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಂದು ಕಡೆ ಗೃಹಲಕ್ಷ್ಮಿ ಹಣ ಸಹ ಸರಿಯಾಗಿ ಬರುತ್ತಿಲ್ಲ. ಇನ್ನೊಂದು ಕಡೆ ಅನ್ನಭಾಗ್ಯ ಯೋಜನೆಯ ಹಣವೂ ಇಲ್ಲ. ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯ ಇರುವುದರಿಂದ ಫೆಬ್ರವರಿ 2025ರಿಂದ ಅನ್ನಭಾಗ್ಯ ಯೋಜನೆಯ ಅಡಿಯ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವರು ಹೇಳಿದ್ದಾರೆ. ಆದ್ರೆ, ಅದಾಗಲೇ ಫೆಬ್ರವರಿ ತಿಂಗಳು ಮುಗಿಯುತ್ತಾ ಬರುತ್ತಿದೆ ಎಂದು ಜನರು ಕಿಡಿ ಕಾರುತ್ತಿದ್ದಾರೆ.