ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಪೂರ್ತಿಗೊಳಿಸಲು ಆಗದೆ ಅರ್ಧಕ್ಕೆ ಬಿಡುವ ಬಡವ, ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ(PM Vidya Lakshmi Education Loan Yojane) ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬುಧವಾರ ಕೇಂದ್ರ ಸಚಿವ ಸಂಪುಟದಲ್ಲಿ ಈ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ಉನ್ನತ ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ರಾಷ್ಟ್ರೀಯ ಶ್ರೇಯಾಂಕದ ಚೌಕಟ್ಟಿನಲ್ಲಿ ರ್ಯಾಂಕ್ ಪಡೆದಿರುವ 100 ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು. ಎಲ್ಲ ಬ್ಯಾಂಕ್ ಗಳಲ್ಲಿ ಡಿಜಿಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಕಡಿಮೆ ಸಮಯದಲ್ಲಿಯೇ ಇದರ ಪ್ರಯೋಜನ ಸಿಗಲಿದೆ. ಪ್ರಾರಂಭದಲ್ಲಿ 860 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 22 ಲಕ್ಷ ವಿದ್ಯಾರ್ಥಿಗಳಿಗೆ ಇದರಡಿಯಲ್ಲಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಲಾಗಿದೆ.