ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ಮಲ್ಲೇಶ್ವರಂನಲ್ಲಿರುವ ಆಟದ ಮೈದಾನದ(ply Ground) ಗೇಟ್ ಬಿದ್ದು 10 ವರ್ಷದ ನಿರಂಜನ್ ಎನ್ನುವ ಬಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ 4.40ಕ್ಕೆ ನಡೆದಿದೆ. ಮೃತ ಬಾಲಕನ(Boy) ಕುಟುಂಬಕ್ಕೆ ಸರ್ಕಾರ, ಬಿಬಿಎಂಪಿ ವತಿಯಿಂದ 5 ಲಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ 10 ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ ತಿಳಿಸಿದರು.
ಘಟನೆ ಬಗ್ಗೆ ಪರಿಶೀಲನೆ ನಡೆಸಲು ಸಮಿತಿ ರಚಿಸಲಾಗುವುದು ಎಂದು ಬಿಬಿಎಂಪಿ(BBMP) ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಹಿಂದೆ ಹಲವು ಬಾರಿ ಗೇಟ್ ಸಮಸ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ಅನಾಹುತ ತಪ್ಪಿಸುವ ಮೊದಲೇ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.