ಪ್ರಜಾಸ್ತ್ರ ಸುದ್ದಿ
ಬೀದರ(Bidara): ಮೊಬೈಲ್ ವಿಚಾರಕ್ಕೆ ಮನೆಯವರು ಬುದ್ದಿವಾದ ಹೇಳಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋನಿ(15) ಮೃತ ಬಾಲಕಿ ಎಂದು ತಿಳಿದು ಬಂದಿದೆ. ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.
ಮಗಳು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳಂತೆ. ಹೀಗಾಗಿ ಹೆಚ್ಚಗಿ ಮೊಬೈಲ್ ಬಳಸಬೇಡ ಎಂದು ತಂದೆ ಸಂತೋಷ ಬುದ್ದಿವಾದ ಹೇಳಿದ್ದು, ಇಷ್ಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳಂತೆ. ಕಮಲನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.