ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ಖಾಸಗಿ ಬಸ್(Bus) ವೊಂದು ಬುಧವಾರ ಮುಂಜಾನೆ ಪಲ್ಟಿಯಾಗಿ 15 ಜನರು ಗಾಯಗೊಂಡಿರುವ ಘಟನೆ ವರದಾಹಳ್ಳಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ(Driver) ಅತಿಯಾದ ವೇಗ ಹಾಗೂ ನಿರ್ಲಕ್ಷ್ಯತನದಿಂದಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ಕೆಲವರಿಗೆ ಗಂಭೀರ ಗಾಯಗಳಾಗಿವೆ. ಜೀವಕ್ಕೆ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ಹೊರಟಿದ್ದ ಬಸ್(Accident) ಅಪಘಾತಗೊಂಡಿದೆ. ನಸುಕಿನ ಜಾವ ಆಗಿದ್ದರಿಂದ ನಿಂದೆ ಮಂಪರಿನಿಂದಾಗಿ ಬಸ್ ನಿಯಂತ್ರಣ ಕಳೆದುಕೊಂಡ ಚಾಲಕ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನಂತೆ. ಹೀಗಾಗಿ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಸ್ಥಳೀಯರು ಪೊಲೀಸ್ ಠಾಣೆಗೆ, ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.