ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿರತೆ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗೊಲ್ಲರಹಟ್ಟಿಯ ಹತ್ತಿರ ನಡೆದಿದೆ. ಕರಿಯಮ್ಮ(55) ಮೃತ ಮಹಿಳೆ ಆಗಿದ್ದಾರೆ. ಎಸಿಎಫ್ ನಿಜಾಮುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಮೃತ ಮಹಿಳೆ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸ್ಥಳಕ್ಕೆ ಬಂಧ ಅರಣ್ಯ ಅಧಿಕಾರಿಗಳ ಎದುರು ಗ್ರಾಮಸ್ಥರು ಚಿರತೆ ಹಿಡಿಯಬೇಕು ಎಂದು ಆಗ್ರಹಿಸಿದರು. ಚಿರತೆ ಸೆರೆ ಹಿಡಿಯಲು ಬೋನ್ ಇರಿಸಲಾಗಿದೆ. ಈ ಬಗ್ಗೆ ಇನ್ನು ಹೆಚ್ಚಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.