ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಕ್ಕರಾಯನಕೆರೆ ಮೈದಾನದಲ್ಲಿ ನಿಲ್ಲಿಸಿದ್ದ 150 ವಾಹನಗಳು ಸುಟ್ಟು ಭಸ್ಮವಾಗಿವೆ. ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದ ವಾಹನಗಳನ್ನು ಜಪ್ತಿ ಮಾಡಿ ಇಲ್ಲಿ ನಿಲ್ಲಿಸಲಾಗಿತ್ತು. ಆದರೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವ ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ನಗರದ ಸುಮಾರು 70 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ವಾಹನಗಳನ್ನು ಜಪ್ತಿ ಮಾಡಲಾಗಿತ್ತು. 10 ಕಾರು ಸೇರಿ 17 ನಾಲ್ಕು ಚಕ್ರದ ವಾಹನಗಳು, 130 ಬೈಕ್ ಗಳು ಸುಟ್ಟು ಕರಕಲಾಗಿವೆ. ಇಲ್ಲಿ ಸುಮಾ 500 ವಾಹನಗಳನ್ನು ನಿಲ್ಲಿಸಲಾಗಿತ್ತು. ಈ ಕುರಿತು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.