ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ವಕ್ಫ್ ಬೋರ್ಡ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಳೆದೊಂದು ತಿಂಗಳಿನಿಂದ ಜಿಲ್ಲೆಯಾದ್ಯಂತ 124 ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸಿಂದಗಿಯಲ್ಲಿ 17 ನೋಟಿಸ್ ನೀಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ತಿಳಿಸಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಹಲವು ಜನರಲ್ಲಿ ಆತಂಕ ಮೂಡುವುದರ ಜೊತೆಗೆ ಅಸಮಾಧಾನ ವ್ಯಕ್ತವಾಗುತ್ತಿದೆ. ಇದರ ನಡುವೆ ಮಂಗಳವಾರ ಬಿಜೆಪಿ ಸಂಸದ ಗೋವಿಂದ್ ಕಾರಜೋಳ ನೇತೃತ್ವದಲ್ಲಿ ತಂಡವೊಂದು ವಿರಕ್ತಮಠಕ್ಕೆ ಭೇಟಿ ನೀಡುತ್ತಿದೆ.