ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಜಿಲ್ಲೆಯಲ್ಲಿ ಒಂದಲ್ಲ ಒಂದು ಅಪರಾಧಿ ಪ್ರಕರಣಗಳು ನಡೆಯುತ್ತಲೇ ಇವೆ. ಇತ್ತೀಚೆಗೆ ಎಟಿಎಂ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ರಿಂಗ್ ರಸ್ತೆಯ ರಾಮನಗರದಲ್ಲಿನ ಎಸ್ ಬಿಐ ಎಟಿಎಂ ಕೇಂದ್ರಕ್ಕೆ ನುಗ್ಗಿ 18 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಬಧುವಾರ ನಸುಕಿನ ಜಾವ 4 ಗಂಟೆಗೆ ಸುಮಾರಿಗೆ ದರೋಡೆ ನಡೆದಿದೆ.
ಕಾರಿನಲ್ಲಿ ಬಂದ ದರೋಡೆಕೋರರು ಎಟಿಎಂನಲ್ಲಿ ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಸ್ಪ್ರೇ ಮಾಡಿದ್ದಾರೆ. ಗ್ಯಾಸ್ ಕಟರ್ ನಿಂದ ಎಟಿಎಂ ಒಡೆದಿದ್ದಾರೆ. ಅದರಲ್ಲಿ 18 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳು ಪತ್ತೆ ಕಾರ್ಯ ನಡೆದಿದೆ. ಸಬರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.