ಪ್ರಜಾಸ್ತ್ರ ಸುದ್ದಿ
ಹೈದರಾಬಾದ್(Hyderabad): ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬರೋಬ್ಬರಿ 19 ಜನರು ಪ್ರಾಣ ಕಳೆದುಕೊಂಡು ಘಟನೆ ಸೋಮವಾರ ಮುಂಜಾನೆ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಹತ್ತಿರ ಬಸ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಷ್ಟೊಂದು ದೊಡ್ಡ ಅನಾಹುತ ನಡೆದಿದೆ. 10 ಮಹಿಳೆಯರು ಸೇರಿ 19 ಜನರು ಮೃತಪಟ್ಟಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಲಾರಿಯಲ್ಲಿ ಜಲ್ಲಿ ಕಲ್ಲುಗಳಿದ್ದು, ಬಸ್ ಮೇಲೆ ಬಿದ್ದ ಪರಿಣಾಮ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ಯಂತ್ರಗಳ ಸಹಾಯದಿಂದ ಅವರನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಹೇಮತ್ ರೆಡ್ಡಿ ಮಾತನಾಡಿದ್ದು, ತಕ್ಷಣವೇ ಎಲ್ಲ ರೀತಿಯ ಪರಿಹಾರಗಳನ್ನು ನೀಡಲಾಗುವುದು ಎಂದಿದ್ದಾರೆ.




