ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಲೋಕಸಭೆಯಲ್ಲಿ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರ ನಡುವೆಯೂ ಗುರುವಾರ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಹಾಗೂ ಅಮಿತ್ ಶಾ ಅವರು ಮಸೂದೆ ಮಂಡಿಸಿದರು.
ಮಹಿಳಾ ಮೀಸಲಾತಿ ತಿದ್ದುಪಡಿ ನೆಪದಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಸಮಿತಿ ರಚನೆ ಮಾಡುವ ಮಸೂದೆ ಸಂವಿಧಾನ ವಿರೋಧಿಯಾಗಿದೆ ಎಂದು ಕಾಂಗ್ರೆಸ್ಸಿನ ಕೆ.ಸಿ ವೇಣುಗೋಪಾಲ ಹೇಳಿದರು. ನಾವು ಮಹಿಳೆಯರ ಪರವಾಗಿದ್ದೇವೆ. ಆದರೆ, ನೀವು ಜನಗಣತಿಯನ್ನು ಯಾಕೆ ನಡೆಸುತ್ತಿಲ್ಲವೆಂದು ಎಸ್ಪಿ ಪಕ್ಷದ ಅಖಿಲೇಶ್ ಯಾದವ್ ಪ್ರಶ್ನಿಸಿದರು.




