Ad imageAd image

ಧಾರವಾಡ: ಬಿಡದೆ ಸುರಿಯುತ್ತಿರುವ ಮಳೆ ಶಾಲಾ ಕಾಲೇಜುಗಳಿಗೆ 2 ದಿನ ರಜೆ

ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿದೆ. ತಣ್ಣನೆಯ ಗಾಳಿ ಬೀಸುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

Nagesh Talawar
ಧಾರವಾಡ: ಬಿಡದೆ ಸುರಿಯುತ್ತಿರುವ ಮಳೆ ಶಾಲಾ ಕಾಲೇಜುಗಳಿಗೆ 2 ದಿನ ರಜೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಜಿಲ್ಲೆಯಾದ್ಯಂತ ಸತತವಾಗಿ(Rain) ಮಳೆಯಾಗುತ್ತಿದೆ. ತಣ್ಣನೆಯ ಗಾಳಿ(Cold air) ಬೀಸುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹೀಗಾಗಿ ಜುಲೈ 25 ಹಾಗೂ 26ರಂದು ಶಾಲಾ,(School College) ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಇದು ಮಕ್ಕಳ ಆರೋಗ್ಯ(Health) ಮತ್ತು ಸುರಕ್ಷತೆ ದೃಷ್ಟಿಯಿಂದ  ಜಿಲ್ಲೆಯ ಎಲ್ಲ  ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ(Holiday) ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಒಟ್ಟಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಜನರ ಜೀವನದ ಮೇಲೆ ಒಂದಿಷ್ಟು ಪರಿಣಾಮ ಬೀರಿದೆ. ವ್ಯಾಪಾರ ವಹಿವಾಟು ಕುಂಟಿತವಾಗಿದೆ.

WhatsApp Group Join Now
Telegram Group Join Now
Share This Article