ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಭಾಗವಹಿಸುವ ಶಿಕ್ಷಕರಿಗೆ 20 ಸಾವಿರ ರೂಪಾಯಿ ಗೌರವಧನ ನೀಡಲಾಗುವುದು. ಸಮೀಕ್ಷೆಗೆ ಹಿಂದೇಟು ಹಾಕುವವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಸಮೀಕ್ಷೆ ವೇಳೆ ಮೂವರು ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಲ್ಲಿ ಸಮೀಕ್ಷೆ ಶೇಕಡ 36ರಷ್ಟು ಆಗಿದ್ದು, ಬಹಳ ಕಡಿಮೆಯಾಗಿದೆ. ಬೆಂಗಳೂರಲ್ಲಿ 46 ಲಕ್ಷ ಮನೆಗಳಿವೆ. 6,700 ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ದಿನಕ್ಕೆ 10-15 ಮನೆಗಳನ್ನು ಪೂರ್ಣಗೊಳಿಸಬೇಕು. ನರಕ ಚತುರ್ಥಿಯೊಳಗೆ ಮುಗಿಸಲಾಗುವುದು ಎಂದು ಹೇಳಿದ್ದಾರೆ. 12 ದಿನದಲ್ಲಿ ಸಂಪೂರ್ಣ ಸಮೀಕ್ಷೆ ಕಾರ್ಯ ಮುಗಿಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.