ಪ್ರಜಾಸ್ತ್ರ ಸುದ್ದಿ
ಬೀದರ(Bidara): ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬರೋಬ್ಬರಿ 22 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಮನೆಗಳು ಸೇರಿದಂತೆ 69 ಕಡೆ ಶೋಧ ನಡೆಸಿದರು.
2017-21ರ ಅವಧಿಯಲ್ಲಿ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದಾರೆ. ಹೀಗಾಗಿ ಆ ಅವಧಿಯಲ್ಲಿ ಕೆಲಸ ಮಾಡಿದ ಕುಲಪತಿಗಳು, ಡೀನ್ ಗಳು, ಅಧಿಕಾರಿಗಳು, ಎಂಜಿನಿಯರ್ ಗಳು, ಸಿಬ್ಬಂದಿ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.