ಪ್ರಜಾಸ್ತ್ರ ಸುದ್ದಿ
ಹೈದರಾಬಾದ್(Hyderabad): ಇಲ್ಲಿನ ಸಂಧ್ಯಾ ಚಿತ್ರಮಂದಿರದಲ್ಲಿ ಬುಧವಾರ ಪುಷ್ಪ-2 ಚಿತ್ರದ ಪ್ರಿಮಿಯರ್ ಶೋ ವೇಳೆ ಸಾಕಷ್ಟು ಜನದಟ್ಟಣೆಯಾಗಿ ಉಸಿರುಗಟ್ಟಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆಕೆಯ ಮಗನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಮಹಿಳೆಯ ಕುಟುಂಬಕ್ಕೆ ಸಾಂತ್ವಾನ ಹೇಳಿರುವ ನಟ ಅಲ್ಲು ಅರ್ಜುನ್, 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಿಮಿಯರ್ ಶೋ ವೇಳೆ ನೂಕುನುಗ್ಗಲು ಆಗಿದೆ. ಈ ವೇಳೆ ಉಸಿರುಗಟ್ಟಿದ್ದರಿಂದ ರೇವತಿ(35) ಎನ್ನುವ ಮಹಿಳೆ ಮೃತಪಟ್ಟಿದ್ದಾಳೆ. ಈಕೆಯ ಮಗ ಶ್ರೀತೇಜ್(08) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದರ ನಡುವೆ ಮಹಿಳೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ನಟ ಅಲ್ಲು ಅರ್ಜುನ್, ಭದ್ರತಾ ಟೀಂ, ಚಿತ್ರಮಂದಿರದ ಮಾಲೀಕರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.