ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದ 25 ಕಡೆ ಗುರುವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಚಕ್ಕಬಳ್ಳಾಪುರ ಸೇರಿದಂತೆ ವಿವಿಧ ಕಡೆ ಬೆಳ್ಳಂಬೆಳಗ್ಗೆ ದಾಳಿ ಮಾಡುವ ಮೂಲಕ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನಲೆ ಹೊಂದಿರುವ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಜಾಗಗಳಲ್ಲಿ ಪರಿಶೀಲನೆ ನಡೆದಿದೆ.
ಮಂಡ್ಯದಲ್ಲಿ ಕಾವೇರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಅಬಕಾರಿ ಎಸ್ ಪಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಹಾಗೂ ಚಿಕ್ಕಬಳ್ಳಾಪುರದ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಎಂಬುವರಿಗೆ ಸಂಬಂಧಿಸಿದ 25 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಆದಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.