Ad imageAd image

ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು

Nagesh Talawar
ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ 20 ಕೃಷ್ಣಮೃಗಗಳು ಮೃತಪಟ್ಟಿವೆ. ಗುರುವಾರ 8 ಮೃತಪಟ್ಟಿದ್ದವು. ಹೀಗೆ ಒಟ್ಟು 28 ಕೃಷ್ಣಮೃಗಗಳು ಮೃತಪಟ್ಟಿದ್ದು, ಆತಂಕ ಮೂಡಿಸಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಗಳಲ್ಲಿ ಇದೀಗ ಬರೋಬ್ಬರಿ 28 ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿವೆ. ಇದಕ್ಕೆ ಏನು ಕಾರಣ ಅನ್ನೋದು ಇದುವರೆಗೂ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article