ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಲೇ ಇಲ್ಲ. ಎಲ್ಲದಕ್ಕೂ ಲಂಚ ಕೊಡಬೇಕು. ಸರಿಯಾದ ಸಮಯಕ್ಕೆ ಕೆಲಸಕ್ಕೆ ಬರಲ್ಲ, ಕೆಲಸ ಮಾಡಲ್ಲ. ಇದರ ಮೇಲೆ 2ನೇ ಹಾಗೂ 4ನೇ ಶನಿವಾರ ರಜೆ ಬೇರೆ ಎಂದು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಲೇ ಇರುತ್ತಾರೆ. ಈಗ 2ನೇ ಹಾಗೂ 4ನೇ ಶನಿವಾರದ ರಜೆಯನ್ನು ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಕೇಂದ್ರ ಸರ್ಕಾರ ರದ್ದುಗೊಳಿಸಿದೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರದ ಈ ಆದೇಶಕ್ಕೆ ರಾಷ್ಟ್ರಪತಿಗಳ ಅಂಕಿತ ಸಹ ಬಿದ್ದಿದೆಯಂತೆ. ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಪತ್ರವನ್ನು ಹೊರಡಿಸಿದೆಯಂತೆ. ಇನ್ನು ಕೆಲವರು ಇದು ಕೇವಲ ನ್ಯಾಯಾಲಯಗಳಿಗೆ ಮಾತ್ರ ಅನ್ವಿಸಲಿದೆ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ಎಲ್ಲ ಸರ್ಕಾರಿ ಇಲಾಖೆಗಳಿಗೆ ಅನ್ವಿಯಿಸಿದರೆ ತುಂಬಾ ಒಳ್ಳೆಯದು ಅನ್ನೋದು ಸಾರ್ವಜನಿಕರ ಅಭಿಪ್ರಾಯವಾಗಿದೆ.