ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಾಗಿದೆ. ವೈಟ್ ಸೈಟ್ ಮೂಲಕ ಫಲಿತಾಂಶ ನೋಡಬಹುದಾಗಿದೆ. ಅಲ್ಲದೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್, ವಾಟ್ಸಪ್ ಮೂಲಕ ಸಹ ಫಲಿತಾಂಶ ರವಾನಿಸಲಾಗಿದೆ.
ಇನ್ನು ಇದೆ ಮೊದಲ ಬಾರಿಗೆ ಫಲಿತಾಂಶದ ಜೊತೆಗೆ ಡಿಜಿಲಾಕರ್ ಮೂಲಕ ಅಂಕಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಇದು ದೇಶದಲ್ಲಿಯೇ ಮೊದಲ ಬಾರಿಗೆ ಆಗಿದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಕಲಾ ವಿಭಾಗದಲ್ಲಿ 1.42 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫೆಬ್ರವರಿ 28 ರಿಂದ ಮಾರ್ಚ್ 17ರ ತನಕ ಪರೀಕ್ಷೆಗಳು ನಡೆದಿದ್ದವು.




