ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬರೋಬ್ಬರಿ 30 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿಗೆ ಸಂಬಂಧಿಸಿದಂತೆ ಹಾಗೂ ಹಲವು ಸಮಸ್ಯೆಗಳ ಈಡೇರಿಕೆ ಸಂಬಂಧ, ಗುತ್ತಿಗೆದಾರರ ಸಂಘದದಿಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ 7 ಸಚಿವರಿಗೆ ಪತ್ರ ಬರೆಯಲಾಗಿದೆ. ಈಗಾಗ್ಲೇ ಹಲವು ಬಾರಿಗೆ ಪತ್ರ ಬರೆದಿದ್ದೇವೆ. ಇದುವರೆಗೂ ತಾವು ಒಂದೂ ಪತ್ರ ಬರೆದಿಲ್ಲ. ಬಿಲ್ ಬಾಕಿ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಕರೆಯಬೇಕು. ಈ ಪತ್ರ ತಲುಪಿದ ಒಂದು ವಾರದೊಳಗೆ ಸಭೆ ಕರೆಯಬೇಕು. ಇಲ್ಲದಿದ್ದರೆ ಸಿಎಂ ಜೊತೆಗೆ ಚರ್ಚಿಸಿ ಹೋರಾಟ ಮಾಡಲಾಗುವುದು ಎಂದಿದ್ದಾರೆ.
ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ವಸತಿ ಸಚಿವ ಜಮೀರ್ ಅಹ್ಮದ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು, ಪೌರಾಡಳಿತ ಸಚಿವ ರಹೀಂ ಖಾನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ದಿನೇಶ್ ಗುಂಡೂರಾವ್ ಅವರಿಗೆ ಜನವರಿ 9ರಂದು ಪತ್ರ ಬರೆಲಾಗಿದೆ.