ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿ ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಕಳೆದೊಂದು ವಾರಕ್ಕಿಂತ ಹೆಚ್ಚು ದಿನಗಳಿಂದ ಹೋರಾಟ ಮಾಡುತ್ತಿದ್ದ ರೈತರು ಜಿಲ್ಲೆಯ ಅಥಣಿ ತಾಲೂಕಿನ ಅಂಬೇಡ್ಕರ್ ವೃತ್ತದಲ್ಲಿ ವಿಜೃಂಭಣೆಯಿಂದ ಸಂಭ್ರಮ ಆಚರಣೆ ಮಾಡಲಾಯಿತು.
ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಹಲ್ಯಾಳ ಸರ್ಕಲ್ (ಶಿವಯೋಗಿ ಸರ್ಕಲ್ ) ರೈತರ ಹೋರಾಟಕ್ಕೆ ಬೆಂಬಲ ಸಿಕ್ಕ ಹಿನ್ನಲೆಯಲ್ಲಿ ಸಂಭ್ರಮ ಆಚರಿಸಲಾಯಿತು. ಈ ವೇಳೆ ರೈತ ಮುಖಂಡರು ಮಾತನಾಡಿ, ನಮ್ಮ ಹೋರಾಟಕ್ಕೆ ಸರ್ಕಾರ ಮಣಿದು ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು.




