ಪ್ರಜಾಸ್ತ್ರ ಸುದ್ದಿ
ಭದ್ರಾವತಿ(Bhdravati): ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಹಳ್ಳಕ್ಕೆ ಉರುಳಿಬಿದ್ದ ಘಟನೆ ಕಾಗೆಹಳ್ಳ ಗ್ರಾಮದ ಹೊರವಲಯದಲ್ಲಿ ಸೋಮವಾರ ನಡೆದಿದೆ. ಇದರಿಂದಾಗಿ ಬಸ್ಸಿನಲ್ಲಿ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳ್ಳಕ್ಕೆ ಅಡ್ಡಲಾಗಿ ಸೇತುವೆ ಕಟ್ಟಲಾಗಿದೆ. ಇಲ್ಲಿ ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿದೆ. ಆಗ ತಡೆಗೋಡೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಹಳ್ಳದಲ್ಲಿ ನೀರು ಹೆಚ್ಚಿಗೆ ಇಲ್ಲದೆ ಇರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲವೆಂದು ತಿಳಿದು ಬಂದಿದೆ. ಭದ್ರಾವತಿ ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




