ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಗೌಡ ವಿರುದ್ಧ ಇದೀಗ 3ನೇ ಎಫ್ಐಆರ್ ದಾಖಲಾಗಿದೆ. ವೈದ್ಯ ಮಂಜುಳಾ ಎಂಬುವರು ಆರ್.ಆರ್ ನಗರ ನಿವಾಸಿ ವಂಚಕಿ ಐಶ್ವರ್ಯಗೌಡ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇಲ್ಲಿ ಈಕೆಯ ಕಾರು ಚಾಲಕ ಅಶ್ವತ್ಥ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈ ಹಿಂದೆ ಆರ್.ಆರ್ ನಗರ, ಚಂದ್ರಾಲೇಔಟ್ ಪೊಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾಜಿ ಸಂಸದ ಡಿ.ಕೆ ಸುರೇಶ್ ಹೆಸರು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ ಹಣ ಕೊಡದೆ ಮೋಸ ಮಾಡಿರುವ ಕುರಿತು ದೂರು ದಾಖಲಾಗಿದೆ. ಇದರಲ್ಲಿ ಕನ್ನಡದ ನಟ ಧರ್ಮೇಂದ್ರ ವಿರುದ್ಧವೂ ಆರೋಪ ಕೇಳಿ ಬಂದಿದೆ. ಈಗಾಗ್ಲೇ ಐಶ್ವರ್ಯಾಗೌಡ, ಈಕೆ ಪತಿಯ ಬಂಧನವಾಗಿದೆ.