ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4.50 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ನಗರದ ರಾಮಮಂದಿರ ವೃತ್ತದಲ್ಲಿ ಮಹಿಳೆಯೊಬ್ಬರು ಬಸ್ ಹತ್ತುವಾಗ ಕಳ್ಳತನ ಮಾಡಲಾಗಿದೆ. ಮಹಿಳೆ ಟಿಕೆಟ್ ತೆಗೆದುಕೊಳ್ಳಲು ಬ್ಯಾಗ್ ನೋಡಿದಾಗ ಚೈನ್ ಹರಿದಿರುವುದು ಕಂಡು ಬಂದಿದೆ.
ಬ್ಯಾಗ್ ನಲ್ಲಿದ್ದ 30 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕಲಬುರಗಿಯಲ್ಲಿ ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಊರಿಗೆ ಹೊರಟಿದ್ದಾಗ ಕಳ್ಳತನ ನಡೆದಿದೆ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




