ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಂಗಳೂರು, ಮಂಡ್ಯ, ಆಂಧ್ರಪ್ರದೇಶ, ಚೆನ್ನೈ ಹಾಗೂ ತೆಲಂಗಾಣದಲ್ಲಿನ ಕೆಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಅವುಗಳ ನಿರ್ದೇಶಕರ ಮನೆ ಮೇಲೆ ಇಡಿ ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದಾರೆ. ಅಲ್ಲದೇ ದಕ್ಷಿಣ ಭಾರತದ ವಿವಿಧ ಕಡೆ ಸೇರಿ ಸುಮಾರು 40 ಕಡೆ ದಾಳಿ ನಡೆಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.