ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇನ್ಪೋಸಿಸ್(Infosys) ನ ಸಂಸ್ಥೆಯ ಮೈಸೂರು ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಮಸ್ಯೆ ಬಗೆಹರಿಸಲು ರಾಜ್ಯ ಕಾರ್ಮಿಕ ಸಚಿವಾಲಯಕ್ಕೆ ಸೂಚನೆ ನೀಡಿದೆ. ಸಾಮೂಹಿಕ ವಜಾ(Termination) ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ತುರ್ತು ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ತರಬೇತಿ ಪಡೆದ ಸುಮಾರು 400 ನೌಕರರನ್ನು(Employees) ಕಳೆದ ಶುಕ್ರವಾರ ಇನ್ಪೋಸಿಸ್ ಮೈಸೂರು ಕ್ಯಾಂಪಸ್ ನಿಂದ ವಜಾಗೊಳಿಸಲಾಗಿದೆ. ಅಲ್ಲಿಂದ ತೆರಳುವಂತೆ ನೌಕರರಿಗೆ ಸೂಚಿಸಲಾಗಿದೆ. ಬೌನ್ಸರ್ ಗಳನ್ನಿಟ್ಟು ಹೊರ ಹಾಕಲಾಗುತ್ತಿದೆ ಎನ್ನುವ ಮಾತುಗಳು ಸಹ ಕೇಳಿ ಬಂದಿವೆ. ಇದು ಅಕ್ರಮ ಹಾಗೂ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಎಂದು ಎನ್ಐಟಿಇಎಸ್ ಹೇಳಿದೆ.