ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ(ಬೆಳಗಿನಜಾವ 2.31) ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ 4 ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಡ್ರ್ಯಾಗನ್ ಗಗನಯಾತ್ರಿಗಳನ್ನು ಹೊತ್ತುಕೊಂಡು ಹೋಗಿದೆ. ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಇದರಲ್ಲಿದ್ದಾರೆ. ನಾನು ಒಬ್ಬಂಟಿಯಲ್ಲ. ನನ್ನ ಹೆಗಲ ಮೇಲೆ ಭಾರತದ ತ್ರಿವರ್ಣ ಧ್ವಜವಿದೆ. ಎಲ್ಲ ಭಾರತೀಯರಿಗೂ ಧನ್ಯವಾದಗಳು. ಜೈ ಹಿಂದ್, ಜೈ ಭಾರತ್ ಎಂದು ಮೆಸೇಜ್ ಕಳಿಸಿದ್ದಾರೆ.
ಗುರುವಾರ ಮುಂಜಾನೆ 7ಗಂಟೆಗೆ(ಭಾರತೀಯ ಕಾಲಮಾನ ಸಂಜೆ 4.30ಕ್ಕೆ) ಐಎಸ್ಎಸ್ ನೊಂದಿಗೆ ಡಾಕ್ ಆಗುತ್ತದೆ. ಅಂದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. 41 ವರ್ಷಗಳ ಬಳಿಕ ಭಾರತೀಯ ಗಗನಯಾನಿ ಬಾಹ್ಯಾಕಾಶಕ್ಕೆ ತೆರಳಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ ರಷ್ಯಾದ ಗಗನನೌಕೆಯಲ್ಲಿ ಪ್ರಯಾಣ ಮಾಡಿದ್ದರು.