ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ತೆಲಂಗಾಣ ಮೂಲದ 42 ಜನರು ಸಾವನ್ನಪ್ಪಿದ್ದಾರೆ. ಮೆಕ್ಕಾ-ಮದೀನಾ ರಸ್ತೆಯಲ್ಲಿ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ಸಿನಲ್ಲಿದ್ದವರೆಲ್ಲ ಬಲಿಯಾಗಿದ್ದಾರೆ.
ಹೈದ್ರಾಬಾದ್ ನ ನಾಂಪಲ್ಲಿಯ ಅಲ್ ಮದೀನ್ ಅಲ್ ಮೀನಾ ಟ್ರಾವೆಲ್ ಏಜನ್ಸಿಯ ಮೂಲಕ ಕಳೆದ ನವೆಂಬರ್ 9ರಂದು ಮೆಕ್ಕಾ-ಮದೀನಾ ಪ್ರವಾಸಕ್ಕೆ ತೆರಳಿದ್ದರು. ಉಮ್ರಾ ಯಾತ್ರೆ ಮುಗಿಸಿಕೊಂಡು ಭಾನುವಾರ ಮೇದಿನಾಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಹೈದ್ರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಈ ಬಗ್ಗೆ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.




