ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಎರಡು ತಿಂಗಳಲ್ಲಿ ಬರೋಬ್ಬರಿ 479 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಾರಾಷ್ಟ್ರದ ಸಚಿವ ಮಕರಂದ್ ಪಾಟೀಲ ಶುಕ್ರವಾರ ಹೇಳಿದ್ದಾರೆ. ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ಇಷ್ಟೊಂದು ಪ್ರಮಾಣದಲ್ಲಿ ರೈತರು ಸಾವಿನ ಹಾದಿ ಹಿಡಿದಿದ್ದಾರೆ ಎಂದು ರಾಜ್ಯ ಪರಿಹಾರ ಹಾಗೂ ಪುನರ್ವಸತಿ ಸಚಿವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಸಚಿವರು ಮರಾಠವಾಡ ಹಾಗೂ ವಿದರ್ಭದಲ್ಲಿಯೇ ಬರೋಬ್ಬರಿ 250 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ ನಲ್ಲಿ ರಾಜ್ಯಾದ್ಯಂತ 229 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಮಾರ್ಚ್ ನಲ್ಲಿ 250 ಪ್ರಕರಣಗಳಲ್ಲಿ 102 ಪ್ರಕರಣಗಳು ಪರಿಹಾರಕ್ಕೆ ಅರ್ಹವಾಗಿವೆ. 77ಕ್ಕೆ ಪರಿಹಾರ ನೀಡಲಾಗಿದೆ. 62 ಅನರ್ಹತೆ ಕಂಡು ಬಂದಿದ್ದು, 86 ಪ್ರಕರಣಗಳು ಬಾಕಿ ಎಂದು ಹೇಳಿದ್ದಾರೆ.