ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಹಿಮಾಚಲ ಪ್ರದೇಶದಲ್ಲಿ ಪ್ರವಾಹದಿಂದ ಭಾರೀ ನಷ್ಟ ಉಂಟಾಗಿದೆ. ಪ್ರಕೃತಿ ಹೊಡೆತಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಜನರು ನಿಮ್ಮೊಂದಿಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಸರ್ಕಾರದಿಂದ ಹಿಮಾಚಲ ಪ್ರಕೃತಿ ವಿಕೋಪ ನಿಧಿಗೆ 5 ಕೋಟಿ ರೂಪಾಯಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಅವರಿಗೆ ಪತ್ರ ಬರೆಯಲಾಗಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.