ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡ 9 ಜನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 58 ವರ್ಷದ ನಿಜಲಿಂಗಪ್ಪ ಬೇಪುರಿ ಹಾಗೂ 18 ವರ್ಷದ ಸಂಜಯ್ ಸವದತ್ತಿ ಮೃತ ದುರ್ದೈವಿಗಳು. ಇವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಘೋಷಿಸಿದೆ. ಈ ಬಗ್ಗೆ ಗುರುವಾರ ಮಾಹಿತಿ ನೀಡಿದೆ. ಇನ್ನು 7 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಸೆಂಬರ್ 22ರ ರಾತ್ರಿ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂದು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಗೆ ಒಬ್ಬರ ಕಾಲು ತಗುಲಿ ಅದು ಬಿದ್ದಿದೆ. ಆಗ ರಿಗ್ಯೂಲೇಟರ್ ಸಡಿಲಗೊಂಡಿದೆ. ದೇವರ ಮುಂದೆ ಹಚ್ಚಿದ ದೀಪದಿಂದಾಗಿ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಉಳಿದವರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.