ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿ ರೂಪಾಯಿ ಹಗರಣ ನಡೆದಿದೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿಗಳಿಗೆ ಈ ಹಗರಣ ಕಂಟಕವಾಗಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಕಾಲ ಸಮೀಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ಮುಡಾ ಹಗರಣದ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರಿಗೆ ಅಭಿನಂದನೆಗಳು. ಸಿದ್ದರಾಮಯ್ಯನವರು ದೆಹಲಿಗೆ ಎಷ್ಟು ಸಾರಿ ಹೋಗಿ ಪ್ಯಾಚ್ ಅಪ್ ಮಾಡಿದರೂ ಸರಿಯಾಗುವುದಿಲ್ಲ. ಅವರು ರಾಜೀನಾಮೆ ಕೊಡುವ ಕಾಲ ಸಮೀಪಿಸಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಒತ್ತಾಯಿಸಿದರು.