ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕೊನೆಗೂ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಈ ಕ್ರಮ ತೆಗೆದುಕೊಂಡಿದ್ದು, ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲಿಗೆ ಬಣ ರಾಜಕೀಯ ಸಂದೇಶ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವುದು, ಸದನದಲ್ಲಿಯೂ ಈ ಬಗ್ಗೆ ಪರೋಕ್ಷವಾಗಿ ಕಿಡಿ ಕಾರಿರುವುದು. ಗುಂಪು ಕಟ್ಟಿಕೊಂಡು ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಿರುವುದು ಸೇರಿದಂತೆ ಹಲವು ಕಾರಣಗಳಿಗೆ ಶೋಕಾಸ್ ನೀಡುತ್ತಾ ಬಂದಿದ್ದು, ಆಗ ಉತ್ತಮ ನಡವಳಿಕೆ ಭರವಸೆ ನೀಡಿದ್ದರೂ ಪದೆಪದೆ ಎಲ್ಲವನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ. ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಆದೇಶದಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದರು. ರಮೇಶ ಜಾರಕಿಹೊಳಿ, ಪ್ರತಾಪ್ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ ಹಲವ ಪಡೆಯನ್ನು ಕಟ್ಟಿಕೊಂಡು ಪದೆಪದೆ ಕೆಂಡ ಕಾರುತ್ತಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗೆ ಇಳಿಸಬೇಕು ಎಂದು ಈ ಟೀಂ ಪಣ ತೊಟ್ಟಿತ್ತು. ಈ ಕಡೆಯಿಂದ ತಮ್ಮ ಸ್ಪರ್ಧೆ ಇರುತ್ತಾರೆ ಎಂದಿದ್ದರು. ಈಗ ಬಿಜೆಪಿ ಶಾಕ್ ಕೊಟ್ಟಿದ್ದು, 6 ವರ್ಷ ಉಚ್ಛಾಟನೆ ಎಂದರೆ 2028ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಸಾಧ್ಯವಿಲ್ಲ ಅನ್ನೋದು ಸ್ಪಷ್ಟ. ಶಾಸಕ ಯತ್ನಾಳ್ ಮುಂದಿನ ನಡೆ ಏನು ಅನ್ನೋ ಪ್ರಶ್ನೆ ಇದೆ.