ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು, ವಿವಿಧ ಸ್ಥಳೀಯ ಸಂಸ್ಥೆಗಳಿಂದ ಭಾರೀ ಪ್ರಮಾಣದಲ್ಲಿ ವಿದ್ಯುತ್ ಬಾಕಿ ಉಳಿದಿದೆ. ಸಣ್ಣ ನೀರಾವರಿ, ಪಂಚಾಯ್ತಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು, ಸ್ಥಳೀಯ ಸಂಸ್ಥೆಗಳಿಂದ 6 ಸಾವಿರ ಕೋಟಿ ವಿದ್ಯುತ್ ಬಿಲ್(Electricity Bill) ಬಾಕಿ ಇದೆ. ಆದಷ್ಟು ಬೇಗ ಎಲ್ಲವನ್ನು ವಸೂಲಿ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ವಿದ್ಯುತ್ ಬಿಲ್ ಬಾಕಿ ಸಂಬಂಧ ಈಗಾಗ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಅಕ್ರಮ ಸಕ್ರಮದಡಿ ಪಂಪ್ ಸಟ್ ಸಂಪರ್ಕಕ್ಕೆ 25 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. 2.5 ಲಕ್ಷ ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಇವುಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕ ಬಳಿಕ ಸಂಪರ್ಕ ಕೊಡಲಾಗುವುದು. ಬೇಸಿಗೆಯಲ್ಲಿ ವಿದ್ಯುತ್ ಕಡಿತ ಮಾಡದಂತೆ ನೋಡಿಕೊಳ್ಳಲು ಬೇರೆ ರಾಜ್ಯಗಳಿಂದ 19,500 ಮೆಗಾ ವ್ಯಾಟ್ ವಿದ್ಯುತ್ ಖರೀದಿಸಲಾಗಿದೆ ಎಂದು ಹೇಳಿದರು.