ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹತ್ತಿರ ಒಳನುಸುಳಲು ಯತ್ನಿಸಿದ 7 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ಗುರವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಸಾಂಬಾ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸಿದ್ದರಂತೆ. ಅವರನ್ನು ಭಾರತೀಯ ಯೋಧರ ಹೊಡೆದುರುಳಿಸಿದ್ದಾರೆ.
ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಭಾರತೀಯ ವಾಯುಪಡೆಯ 13 ಸೇರಿದಂತೆ ಒಟ್ಟು 15 ಸೇನಾ ನೆಲೆಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ಮಾಡಲು ನಡೆಸಿದ್ದ ಪಾಕ್ ಕುತಂತ್ರವನ್ನು ವಿಫಲಗೊಳಿಸಿದೆ. ಅಲ್ಲದೆ ಪಾಕಿಸ್ತಾನದ ಲಾಹೋರ್ ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶ ಮಾಡಲಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.