Ad imageAd image

ಮಹಾರಾಷ್ಟ್ರ: ಬಲವಂತದ ಮತಾಂತರಕ್ಕೆ 7 ವರ್ಷ ಜೈಲು ಶಿಕ್ಷೆ

Nagesh Talawar
ಮಹಾರಾಷ್ಟ್ರ: ಬಲವಂತದ ಮತಾಂತರಕ್ಕೆ 7 ವರ್ಷ ಜೈಲು ಶಿಕ್ಷೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮುಂಬೈ(Mumbai): ಬಲವಂತ, ಆಮಿಷ ಅಥವ ಮದುವೆಯ ಕಾರಣಕ್ಕೆ ಮತಾಂತರಗೊಳ್ಳುವುದನ್ನು ನಿರ್ಬಂಧಿಸುವ ‘ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ-2026ಕ್ಕೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ರಾತ್ರಿ ಅಂಗೀಕಾರ ಪಡೆದಿದೆ. ಬಲವಂತವಾಗಿ ಮತಾಂತರ ಮಾಡಿದರೆ 7 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸುವ ಕುರಿತು ಕಾಯ್ದೆಯಲ್ಲಿ ತಿಳಿಸಲಾಗಿದೆ.

ಮಾನಸಿಕ ಅಸ್ವಸ್ಥ ಮಹಿಳೆ, ಅಪ್ರಾಪ್ತ, ಎಸ್ಸಿ, ಎಸ್ಟಿಗೆ ಸೇರಿದವರನ್ನು ಮತಾಂತರ ಮಾಡಿದರೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ 7 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂಪಾಯಿ ದಂಡ, ಇದೆ ರೀತಿ ಮುಂದುವರೆದರೆ ಅಂತವರ ವಿರುದ್ಧ 10 ವರ್ಷ ಜೈಲು ಶಿಕ್ಷೆ 5 ಲಕ್ಷ ರೂಪಾಯಿ ದಂಡ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಈಗಾಗ್ಲೇ ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಓಡಿಶಾ, ಹರಿಯಾಣ, ಮಧ್ಯಪ್ರದೇಶ ಹಾಗೂ ಜಾರ್ಖಂಡ್ ನಲ್ಲಿ ಜಾರಿಯಲ್ಲಿದೆ. ಇದು ಯಾವುದೇ ಧರ್ಮದ ವಿರುದ್ಧವಲ್ಲ. ಬಲವಂತದ, ಮೋಸದ ಮತಾಂತರ ತಡೆಯಲು ಈ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article