ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ(Bagalakote): ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಕೇವಲ 7ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳು ಗರ್ಭಿಣಿಯಾಗಿದ್ದಾಳೆ. ಇಳಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಅದೇ ಶಾಲೆಯ 8ನೇ ತರಗತಿ ವಿದ್ಯಾರ್ಥಿ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲಾ ಆವರಣ ಹಾಗೂ ಲೋಕಾಪುರ ಹತ್ತಿರದ ಹೊಲದಲ್ಲಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ. ಬಾಲಕ ಸಹ ಅಪ್ರಾಪ್ತನಾಗಿದ್ದು, ಕಾನೂನೊಂದಿಗೆ ಸಂಘರ್ಷದಲ್ಲಿರುವ ಮಗು ಎಂದು ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೂಸಂಬೆ ಹೇಳಿದ್ದಾರೆ. ನ್ಯಾಯ ಮಂಡಳಿ ಎದುರು ಸೋಮವಾರ ಹಾಜರುಪಡಿಸಲಾಗುವುದು ಎನ್ನಲಾಗುತ್ತಿದೆ.