ಪ್ರಜಾಸ್ತ್ರ ಸುದ್ದಿ
ದಕ್ಷಿಣ ಕನ್ನಡ(Dakshin Kannada): ಕೇವಲ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎಲ್ಲರಲ್ಲಿಯೂ ಆತಂಕ ಮೂಡಿದೆ. ಮನೆಯಲ್ಲಿ ಚಿಕನ್ ಫ್ರೈ ತಿಂದ ಬಾಲಕ ಮಲಗಲು ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟೊಂದು ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವಂತದ್ದು ಏನಾಗಿತ್ತು? ಆ ಬಾಲಕನ ಮನಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ವಿಚಾರ ಬಂದಿದ್ದು ಹೇಗೆ ಅನ್ನೋ ಪ್ರಶ್ನೆ ಮೂಡಿದೆ. ಮಗನನ್ನು ಕಳೆದುಕೊಂಡು ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.