ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ಸ್ ಗಳನ್ನು ಮಾಡುತ್ತಿದ್ದ 8 ಆರೋಪಿಗಳನ್ನು ಪೊಲೀಸರು ಬಂಧಿದ್ದು, ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ. ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿದ್ದಾರೆ.
ಮೊಬೈಲ್ ಗಳನ್ನು ಎಫ್ಎಸ್ಎಲ್ ವರದಿಗಾಗಿ ಕಳಿಸಿಕೊಡಲಾಗಿದೆ. ಟೆಕ್ನಿಕಲ್ ಸಾಕ್ಷಿಗಳನ್ನು ಕಲೆ ಹಾಕಲಾಗುತ್ತಿದೆ. ಇದೆಲ್ಲದರ ವರದಿ ಬಂದ ನಂತರ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆರೋಪಿಗಳಿಗೆ ಸಧ್ಯ ಜಾಮೀನು ಸಿಕ್ಕಿಲ್ಲ. ಇನ್ನು ಕೆಲವರ ಸುಳಿವು ಸಿಕ್ಕಿಲ್ಲ. ಹೀಗಾಗಿ ತಲೆಮರೆಸಿಕೊಂಡಿದ್ದಾರೆ ಎಂದು ಉಲ್ಲೇಖಿಸುವ ಸಾಧ್ಯತೆಯಿದೆ. 60 ದಿನಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಸುವುದು ಅನಿವಾರ್ಯವಾಗಿದೆ.




