ಪ್ರಜಾಸ್ತ್ರ ಸುದ್ದಿ
ನಾಗ್ಪುರ(Nagapura): ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರ್ ಮನೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ನಗರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಲಾಗಿದೆ. ಇದರಿಂದಾಗಿ ಪೊಲೀಸರು ಆತಂಕಕ್ಕೆ ಒಳಗಾಗಿದ್ದರು. 112 ನಂಬರ್ ಕರೆ ಮಾಡಿದ ಮೊಬೈಲ್ ಸಂಖ್ಯೆಯನ್ನು ಪತ್ತೆ ಮಾಡಲಾಯಿತು. ವಿಮಾ ದವಾಖಾನಾ ಎಂಬಲ್ಲಿ ರಾವುತ್ ಅನ್ನೋ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಸುಳ್ಳು ಬೆದರಿಕೆ ಕರೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ, ಈ ಹಿಂದೆಯೂ ಈತ ಇದೇ ರೀತಿ ಮಾಡಿದ್ದನೆ ಎನ್ನುವುದನ್ನು ತಿಳಿದುಕೊಳ್ಳಲು ವಿಚಾರಣೆ ನಡೆಸಲಾಗುತ್ತಿದೆ. ಭಾರತೀಯ ದಂಡ ಸಂಹಿತೆಯ ವಿವಿಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.