ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಅನೇಕ ಕಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯವಸ್ಥೆಗೊಂಡಿದೆ. ಇನ್ನು ಅಳ್ನಾವರ ತಾಲೂಕಿನ ಬೆಣಚಿ ಹಾಗೂ ಬೆಳಗೇರಿ ಗ್ರಾಮಗಳ ನಡುವೆ ಸಂಪರ್ಕ ಸಾಧಿಸುವ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಈ ಭಾಗದ ಜನರು ಪರದಾಡುತ್ತಿದ್ದಾರೆ.
ಇಲ್ಲಿನ ಸೇತುವೆ ಕೊಚ್ಚಿಕೊಂಡು ಹೋಗಿರುವುದಕ್ಕೆ ಪರ್ಯಾಯ ಮಾರ್ಗವಿಲ್ಲದೆ ಎರಡು ಗ್ರಾಮಗಳ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. 2019ರಲ್ಲಿಯೂ ಇದೇ ರೀತಿ ಸೇತುವೆ ಹಾಳಾಗಿತ್ತು. ಇದೀಗ ಕೊಚ್ಚಿಕೊಂಡು ಹೋಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಗಮನ ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.