ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಉದ್ಯಮಿಯ ಕಾರು ಗಡ್ಡಗಟ್ಟಿ 1.5 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಸೋಮವಾರ ಮುಂಜಾನೆ ತಾಲೂಕಿನ ಗುಜ್ಜೇಗೌಡನಪುರ ಗ್ರಾಮದ ಹತ್ತಿರ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಒಂದಲ್ಲ ಒಂದು ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಜನರು ಆತಂಕದಲ್ಲಿ ಜೀವನ ಮಾಡುವಂತಾಗಿದೆ. ಮಸುಕುಧಾರಿಗಳ ಗುಂಪುವೊಂದು ಕಾರು ಗಡ್ಡಗಟ್ಟಿ ಉದ್ಯಮಿ ಮೇಲೆ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದೆ.
ಕೇರಳ ಮೂಲದ ಅಡಿಕೆ ವ್ಯಾಪಾರಿ ಶಫಿ ಹಾಗೂ ಕಾರು ಚಾಲಕನ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಲಾಗಿದೆ. ಅಲ್ಲದೆ ಅದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಮೈಸೂರು-ಮಾನಂದವಾಡಿ ರಾಜ್ಯ ಹೆದ್ದಾರಿ ಮೂಲಕ ಇವರು ತೆರಳುತ್ತಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸಿದ್ದಾರೆ. ಮೇಲಿಂದ ಮೇಲೆ ದರೋಡೆ ಘಟನೆಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆಗೆ ತಲೆನೋವು ತಂದಿದ್ದಾರೆ. ಇನ್ನೊಂದು ಕಡೆ ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ ಎಂದು ಕಿಡಿ ಕಾರುತ್ತಿದ್ದಾರೆ.