ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಸಿಲಿಕಾನ್ ಸಿಟಿಯ ಬನ್ನೇರುಘಟ್ಟ ರಸ್ತೆಯ ಅರಕೆರೆ ಹತ್ತಿರ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಬಸ್ಸಿಗೂ ಸಹ ಹಾನಿಯಾಗಿದೆ.
ಈ ಅಪಘಾತದಿಂದಾಗಿ ಶಾಲಾ ವಿದ್ಯಾರ್ಥಿಗಳು ಗಾಬರಿಗೊಂಡಿದ್ದರು. ಕೆಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ. ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು.




