ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಪತ್ತೆ ಮಾಡುವ ಕೆಲಸ ನಡೆದಿದೆ. ಅಣ್ಣಿಗೇರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.