ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಗೌರವದಿಂದ ಮಾತನಾಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ. ಅಕುಲಾ ಅನುರಾಧಾ ಎಂಬುವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ನಟಿ ರನ್ಯಾ ರಾವ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಬಹುಭಾಷಾ ನಟಿಯಾಗಿದ್ದಾರೆ. ಸಮಾಜದಲ್ಲಿ ಗೌರವ ಹೊಂದಿದ್ದಾರೆ. ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.