ಪ್ರಜಾಸ್ತ್ರ ಸುದ್ದಿ
ಬೆಳ್ತಂಗಡಿ(Beltangadi): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಹೇಳಿ ದೂರು ದಾಖಲಾದ ಹಿನ್ನಲೆಯಲ್ಲಿ ಆಗಸ್ಟ್ 21ರಂದು ಮಹೇಶ್ ತಿಮರೋಡಿ ಅವರನ್ನು ಬಂಧಿಸಲಾಗಿದೆ. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಗಿರೀಶ್ ಮಟ್ಟೆಣ್ಣವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಅರುಣ್.ಕೆ ತಿಳಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಅವರು ಸ್ವಂತ ವಾಹನದಲ್ಲಿ ಬಂದಿದ್ದಾರೆ. ಆಗ ಪೊಲೀಸರ ವಾಹನಗಳನ್ನು 10-15 ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬರಲಾಗಿದೆ. ಈ ಮೂಲಕ ಕರ್ತವ್ಯಕ್ಕೆ ಅಡ್ಡಿ ಹಾಗೂ ಬೆದರಿಕೆ ಹಾಕಿದ್ದಾರೆಂದು ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 132, 189(2), 351(2), 263(ಎ), 190 ಹಾಗೂ 262ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.