ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅವಹೇಳನಕಾರ ಮಾಡಲಾಗಿದೆ ಎಂದು ಆರೋಪಿಸಿ ಸೌಜನ್ಯಳಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಡುಪಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೇಸ್ ಬುಕ್ ಪೇಜ್ ನಲ್ಲಿ ವಿಡಿಯೋ ಮಾಡಿ ಬೇರೆ ಬೇರೆ ಧರ್ಮಗಳ ನಡುವೆ ಹಾಗೂ ಸಮುದಾದಯ ನಡುವೆ ದ್ವೇಷ ಭಾವನೆ ಉಂಟು ಮಾಡಿದ್ದಾರೆ. ಸಂತೋಷ್ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಹೀಗಾಗಿ ತಿಮರೋಡಿ ವಿರುದ್ಧ ಬಿಎನ್ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.